ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳವಾರ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಹಳೆಯಂಗಡಿ ರೈಲ್ವೆ ಸೇತುವೆಯ ಬಳಿ ಶವವಾಗಿ ಪತ್ತೆಯಾಗಿದ್ದಾರೆ.
ಯಶ್ವಿತ್ (15), ರಾಘವೇಂದ್ರ (15), ನಿರೂಪ್ (15), ಅನ್ವಿತ್ (15) ಮಂಗಳೂರಿನ ಸುರತ್ಕಲ್ನಲ್ಲಿರುವ ವಿದ್ಯಾದಾಯಿನಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಮಕ್ಕಳು.
ನಿನ್ನೆ ವಿದ್ಯಾರ್ಥಿಗಳು ಪರೀಕ್ಷೆ ಮುಗಿಸಿ ಶಾಲೆಯಿಂದ ಮನೆಗೆ ಬರದೇ ನಾಪತ್ತೆಯಾಗಿದ್ದರು. ಮಕ್ಕಳು ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತು ಪೊಲೀಸರು ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದಾರೆ. ಶಾಲೆಯ ಬಳಿ ಇದ್ದ ಹಳೆಯಂಗಡಿ ನದಿಯ ಬಳಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಮತ್ತು ಸಮವಸ್ತ್ರ ಪತ್ತೆಯಾಗಿದ್ದವು.
ತೀವ್ರ ಶೋಧದ ನಂತರ ನಾಲ್ಕು ಮಕ್ಕಳ ಶವ ಅಲ್ಲಿ ಪತ್ತೆಯಾಗಿವೆ. ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.