ದಿಗಂತ ವರದಿ ವಿಜಯಪುರ:
ವಿಧಾನಸೌಧದಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಖಂಡಿಸಿ ನಗರದ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ.
ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬ್ಯಾರಿಕೇಡ್ ತಳ್ಳಿ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಆದರು, ಬ್ಯಾರಿಕೇಡ್ ಕಿತ್ತು ಕಾರ್ಯಕರ್ತರು ಒಳಗೆ ನುಗ್ಗಲು ಯತ್ನಿಸಿದರು. ಹೀಗಾಗಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪ್ರತಿಭಟನಾಕಾರರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.