ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿರುವ ನಟ ಹಾಗೂ ಮಾಜಿ ಐಎಎಸ್ ಅಧಿಕಾರಿ ಕೆ ಶಿವರಾಮ್ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಎಚ್ಸಿಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರದಿಗಳ ಪ್ರಕಾರ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಅಗತ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಕೆ ಶಿವರಾಮ್ ಅವರ ಅಳಿಯ ಭರತ್ ಹೇಳುವ ಪ್ರಕಾರ, 20 ದಿನಗಳ ಹಿಂದೆ ಅಧಿಕ ರಕ್ತದೊತ್ತಡದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಸದ್ಯ ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ತಿಳಿಸಿದ್ದಾರೆ.