ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಗಣಿಗಾರಿಕೆ (Illegal Mining Case) ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳ (CBI) ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ (Akhilesh Yadav) ಅವರಿಗೆ ಸಮನ್ಸ್ ಜಾರಿ ಮಾಡಿದೆ.
ದೆಹಲಿಗೆ ಗುರುವಾರ ಆಗಮಿಸಿ ವಿಚಾರಣೆಗೆ ಹಾಜರಾಗಬೇಕೆಂದು ಅಖಿಲೇಶ್‌ಗೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ.
2012-2016ರ ಅವಧಿಯಲ್ಲಿ ಹಮೀರ್‌ಪುರ್‌ನಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಅಖಿಲೇಶ್‌ಗೆ ಸೂಚಿಸಲಾಗಿದೆ.