ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಹೆಚ್ಚಾಗಿದ್ದು, ಸಿಎಂ ಸುಖ್ವಿಂದರ್ ಸಿಂಗ್ ಸುಖು ರಾಜೀನಾಮೆ ನೀಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.

ರಾಜ್ಯಸಭಾ ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವಂತೆ ಪ್ರತಿಪಕ್ಷ ಬಿಜೆಪಿ ಸದಸ್ಯರು ಪಟ್ಟು ಹಿಡಿದಿದ್ದರು.ಹೀಗಾಗಿ ವಿಶ್ವಾಸಮತ ಸಾಬೀತುಪಡಿಸಲೂ ವಿಫಲವಾಗಬಹುದು ಎಂಬ ಸಾಧ್ಯತೆ ಹಿನ್ನೆಲೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವ ಮೊದಲೇ ಸಿಎಂ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

ಆದ್ರೆ ನಾನು ಯಾವುದೇ ರಾಜೀನಾಮೆಯನ್ನು ನೀಡಿಲ್ಲ. ನಾನೊಬ್ಬ ಯೋಧ, ಹೋರಾಟ ಮುಂದುವರಿಸುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಐದು ವರ್ಷಗಳ ಕಾಲ ಅಧಿಕಾರದಲ್ಲಿರಲಿದೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಪ್ರಸ್ತುತ ಸರ್ಕಾರವು ಶಾಸಕರನ್ನು ಅವಮಾನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ವಿಕ್ರಮಾದಿತ್ಯ ಸಿಂಗ್ ಅವರು ಸಚಿವ ಸಂಪುಟಕ್ಕೆ ರಾಜೀನಾಮೆ ಘೋಷಿಸಿದ ಕೆಲವೇ ಗಂಟೆಗಳ ನಂತರ, ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬುದಾಗಿ ವರದಿಗಳಿಂದ ತಿಳಿದು ಬಂದಿತ್ತು.

ಪರಿಸ್ಥಿತಿಯ ಉಸ್ತುವಾರಿ ವಹಿಸಲು ಬುಧವಾರ ಶಿಮ್ಲಾಕ್ಕೆ ಧಾವಿಸಿದ ಕಾಂಗ್ರೆಸ್ ವೀಕ್ಷಕರಾದ ಭೂಪಿಂದರ್ ಸಿಂಗ್ ಹೂಡಾ ಮತ್ತು ಡಿ.ಕೆ.ಶಿವಕುಮಾರ್ ಅವರು ಅವರ ರಾಜೀನಾಮೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಜ್ಜಾಗಿದ್ದಾರೆ ಎನ್ನಲಾಗಿತ್ತು.

ಈ ಎಲ್ಲದರ ನಡುವೆ ನಾನು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿಲ್ಲ ಎಂಬುದಾಗಿ ಸುಖ್ವಿಂದರ್ ಸಿಂಗ್ ಸುಖು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ನನ್ನ ಹೋರಾಟವನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!