ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಕೆ ಶಿವರಾಮ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಇದಲ್ಲದೆ, ಅವರ ಮೆದುಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೆಂಗಳೂರಿನ ಎಚ್‌ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿರುವ ಶಿವರಾಮ್ ಅವರನ್ನು ನೋಡಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಆಸ್ಪತ್ರೆಗೆ ಬಂದಿದ್ದರು. ಶಿವರಾಮ್ ಪರಿಸ್ಥಿತಿ ನೋಡಿ ಯಡಿಯೂರಪ್ಪ ಮರುಗಿದ್ದಾರೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.