ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾವು ಹೆಚ್ಚು ಹೆಚ್ಚು ತಂತ್ರಜ್ಞಾನದ ಮೇಲೆ ಅವಲಂಬಿತರಾಗುತ್ತಿದ್ದಾರೆ. ಸೈಬರ್ ಅಪರಾಧಿಗಳಿಗೆ ವಂಚನೆ ಮಾಡಲು ಇದು ತುಂಬಾ ಉಪಯುಕ್ತವಾಗಿದೆ. ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಲ್ಲಿ ಸೈಬರ್ ಕ್ರೈಂಗಳ ಸಂಖ್ಯೆಯೂ ಹೆಚ್ಚಿದೆ. ಸೈಬರ್ ಅಪರಾಧಗಳನ್ನು ತಡೆಯಲು ಕರ್ನಾಟಕ ಪೊಲೀಸರು ದಿಟ್ಟ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಹೇಳಿದ್ದಾರೆ.
ಸೈಬರ್ ಕ್ರೈಮ್ ಕಾನ್ಫರೆನ್ಸ್‌ನಲ್ಲಿ ಡಾ.ಅಲೋಕ್ ಮೋಹನ್ ಭಾಗವಹಿಸಿ. ಸೈಬರ್ ಕ್ರೈಮ್ ಮತ್ತು ಕರ್ನಾಟಕ ಪೊಲೀಸರ ಬಗ್ಗೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಡಿಜಿಟಲ್ ನೆಟ್‌ವರ್ಕ್‌ಗಳು ಮತ್ತು ಡೇಟಾವನ್ನು ಕದಿಯಲು ಸೈಬರ್ ಅಪರಾಧಿಗಳು ಹ್ಯಾಕಿಂಗ್ ತಂತ್ರಗಳನ್ನು ಬಳಸುತ್ತಾರೆ. ಇದಕ್ಕೆಲ್ಲ ಕಡಿವಾಣ ಹಾಕಲು ರಾಜ್ಯ ಪೊಲೀಸರು ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.