ಹೊಸದಿಗಂತ ,ವಿಜಯಪುರ:
ಬಡ್ಡಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಡೆದಿದೆ. ಪರಶುರಾಮ (22) ಮೃತಪಟ್ಟ ಯುವಕ.
ಪರಶುರಾಮ ಈತನನ್ನು ದುಷ್ಕರ್ಮಿಗಳು ಆಯುಧದಿಂದ ಹೊಡೆದು ಬರ್ಬರ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಎಸ್ಪಿ ಋಷಿಕೇಶ್ ಸೋನಾವಣೆ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ಮಾಡಿ ಪರಿಶೀಲನೆ ನಡೆಸಿದರು. ಆಲಮೇಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.