ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹು ನಿರೀಕ್ಷಿತ ಜಾತಿ ಗಣತಿ ವರದ ಸಿಎಂ ಸಿದ್ದರಾಮಯ್ಯ ಅವರ ಕೈ ಸೇರಿದೆ.
ರಾಜಕೀಯವಾಗಿ ಸಾಕಷ್ಟು ಮಾತುಕತೆಗೆ ಎಡೆ ಮಾಡಿಕೊಟ್ಟಿದ್ದ ಜಾತಿ ಗಣತಿ ಕಡೆಗೂ ಸಿಎಂ ಕೈ ಸೇರಿದ್ದು, ಶಾಶ್ವತ ಹಿಂದುಳಿದ ಆಯೋಗಗಳ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ವರದಿಯನ್ನು ಸಿಎಂಗೆ ನೀಡಿದ್ದಾರೆ.
ಜಾತಿಗಣತಿ ವರದಿ 2013ರಲ್ಲಿ ಸಿದ್ದರಾಮಯ್ಯ ಸರ್ಕಾರ ನಡೆಸಿದ ಕರ್ನಾಟಕ ಸಾಮಾಜಿಕ-ಆರ್ಥಿಕ ಸಮೀಕ್ಷೆ ಹಿಂದುಳಿದ ಸಮಾಜಗಳ ಸಬಲೀಕರಣಕ್ಕಾಗಿ ಅಹಿಂದ ನಾಯಕ ಕೈಗೊಂಡ ಮಹತ್ವದ ನಿರ್ಧಾರ ಇದಾಗಿದೆ.
ಸಿದ್ದರಾಮಯ್ಯ ಸರ್ಕಾರದ ಜಾತಿ ಗಣತಿ ವರದಿ ಕುರಿತು ಚರ್ಚೆ ಮುಂದುವರಿದಿದೆ. ಸರ್ಕಾರ ಪಾರದರ್ಶಕವಾಗಿ ಸಮೀಕ್ಷೆ ನಡೆಸಿಲ್ಲ ಎಂಬ ಆರೋಪವೂ ಇದೆ. ಕಾಂತರಾಜು ವರದಿ ಅನುಷ್ಠಾನಕ್ಕೆ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ಮುಖಂಡರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.