ಹೊಸದಿಗಂತ ವರದಿ, ಬಳ್ಳಾರಿ:
ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಮುಂಡರಗಿ ನಾಗರಾಜ್ ಅವರು ನೇಮಕಗೊಂಡಿದ್ದಾರೆ.
ಈ ಕುರಿತು ಸರ್ಕಾರ ಆ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
ನಿಗಮ ಮಂಡಳಿ ಅಧ್ಯಕ್ಷರಾದ ಸುದ್ದಿ ತಿಳಿಯುತ್ತಿದ್ದಂತೆ, ಅಭಿಮಾನಿಗಳ, ಕಾರ್ಯಕರ್ತರಿಂದ ಅಭಿನಂದನೆಗಳ ಪೂರವೇ ಹರಿದು ಬಂತು. ಅಭಿಮಾನಿಗಳು ಕುಣಿದು ಕುಪ್ಪಳಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.