ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಮಾರು 20 ಭಾರತೀಯರು ರಷ್ಯಾದಲ್ಲಿ ಸಿಕ್ಕಿಬಿದ್ದಿದ್ದು, ಅವರನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಭಾರತವು ದೆಹಲಿ ಮತ್ತು ಮಾಸ್ಕೋದಲ್ಲಿರುವ ರಷ್ಯಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ.
ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಅವರು ಈ ಕುರಿತು ಮಾಹಿತಿ ನೀಡಿದ್ದು,20 ಜನರು ಸಿಲುಕಿಕೊಂಡಿದ್ದಾರೆ ಎಂದು ನಮಗೆ ತಿಳಿದಿದೆ. ಅವರ ಬಿಡುಗಡೆಗಾಗಿ ನಾವು ಪ್ರಯತ್ನಿಸುತ್ತಿದ್ದೇವೆ. ನಾವು ಯುದ್ಧ ವಲಯಕ್ಕೆ ಹೋಗಬೇಡಿ ಅಥವಾ ಸಿಕ್ಕಿಹಾಕಿಕೊಳ್ಳಬೇಡಿ ಎಂದು ಜನರಿಗೆ ಹೇಳಿದ್ದೇವೆ. ದೆಹಲಿ ಮತ್ತು ಮಾಸ್ಕೋದಲ್ಲಿ ರಷ್ಯಾದ ಅಧಿಕಾರಿಗಳೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದೇವೆ ಎಂದು ಜೈಸ್ವಾಲ್ ಹೇಳಿದರು.
ರಷ್ಯಾ-ಉಕ್ರೇನ್ ಯುದ್ಧದಲ್ಲಿ ಭಾರತೀಯ ಪ್ರಜೆಗಳು ಸಿಕ್ಕಿಬಿದ್ದಿದ್ದಾರೆ. ಉಕ್ರೇನ್ ವಿರುದ್ಧ ಹೋರಾಡಲು ರಷ್ಯಾದ ಸೈನ್ಯದ ಬೆಂಬಲದ ಉದ್ಯೋಗಗಳಲ್ಲಿ ಬಲವಂತವಾಗಿ ಬಳಸಿಕೊಳ್ಳಲಾಗಿದೆ. ದುಬೈ ಮೂಲದ ಏಜೆಂಟ್ನಿಂದ ನೂರಾರು ಭಾರತೀಯರನ್ನು ರಷ್ಯಾಕ್ಕೆ ಸಾಗಿಸಲಾಗುತ್ತಿದೆ ಎಂದು ಹೇಳಲಾಗಿದೆ.