ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿದಿನ ಸೂರ್ಯನ ತಾಪಮಾನ ಹೆಚ್ಚುತ್ತಲೇ ಇದೆ. ಹೀಗಾಗಿ ಬಿಸಿಲ ಝಳ ತಡೆಯಲು ಆಗುತ್ತಿಲ್ಲ. ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದ್ದು, ಅದರ ಪ್ರಕಾರ ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದೆ.
ಮುಂದಿನ 48 ಗಂಟೆಗಳಲ್ಲಿ ರಾಜ್ಯದಾದ್ಯಂತ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ನಿರೀಕ್ಷೆಯಿದೆ. ಅಲ್ಲದೆ, ಉತ್ತರದ ಒಳಭಾಗ ಮತ್ತು ಕರಾವಳಿಯ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಇರುತ್ತದೆ.