ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಪರ ಘೋಷಣೆ ವಿವಾದ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿ ಮಾಡಿದೆ. ಇದೀಗ ಈ ಪ್ರಕರಣದ ಕುರಿತ ವರದಿ ರಾಜ್ಯ ಸರ್ಕಾರದ ಕೈ ಸೇರಿದೆ. ಪಾಕಿಸ್ತಾನ ಪರ ಘೋಷಣೆಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಕಾಂಗ್ರೆಸ್ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಗಳು ಕೇಳಿಬಂದಿವೆ. ವಿಡಿಯೋದಲ್ಲಿ ಕೇಳಿಬಂದಿರುವ ಪಾಕಿಸ್ತಾನದ ಪರ ಘೋಷಣೆಯ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದವು. ಹಾಗಾಗಿ ಸರ್ಕಾರವು ವೀಡಿಯೋವನ್ನು ಪರಿಶೀಲನೆಗಾಗಿ ಎಫ್‌ಎಸ್‌ಎಲ್‌ಗೆ ಕಳುಹಿಸಿ ಕೊಡಲಾಗಿತ್ತು. ಇದೀಗ ಎಫ್‌ಎಸ್‌ಎಲ್ ವರದಿ ಸರ್ಕಾರದ ಕೈಸೇರಿದೆ.
ಪಾಕಿಸ್ತಾನ ಪರ ಘೋಷಣೆಗಳಿರುವ ವಿಡಿಯೋದ ಆಡಿಯೋ ಪರೀಕ್ಷೆ ನಡೆಸಲು ವಿಡಿಯೋವನ್ನು ಎಫ್‌ಎಸ್‌ಎಲ್ ಗೆ ಕಳುಹಿಸಲಾಗಿತ್ತು. ಇದೀಗ ತನಿಖೆ ನಡೆಸಿರುವ ಎಫ್‌ಎಸ್‌ಎಲ್ ತಂಡವು ರಾಜ್ಯ ಗೃಹ ಇಲಾಖೆಗೆ ತನ್ನ ವರದಿಯನ್ನು ಸಲ್ಲಿಸಿದೆ. ಜತೆಗೆ ಪ್ರಕರಣದ ಆರೋಪಿಗಳ ಧ್ವನಿ ಪರೀಕ್ಷೆಯೂ ನಡೆಸಲಾಗಿದೆ ಎಂಬ ಮಾಹಿತಿ ಇದೆ.