ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಪ್ರದೇಶದ ಲಕ್ನೋದಲ್ಲಿ ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆ ಗಣಿತ, ಜೀವಶಾಸ್ತ್ರ( Maths and biology) ಪ್ರಶ್ನೆ ಪತ್ರಿಕೆಗಳು ವಾಟ್ಸಾಪ್ ಗುಂಪುಗಳಲ್ಲಿ ಸೋರಿಕೆಯಾಗಿದೆ ಎಂದು ಆರೋಪಿಸಲಾಗಿದೆ.
ಗಣಿತ ಹಾಗೂ ಜೀವಶಾಸ್ತ್ರ ಪ್ರಶ್ನೆ ಪತ್ರಿಕೆಗಳು ಲೀಕ್ ಆಗಿವೆ ಎನ್ನಲಾಗಿದೆ. ಗುರುವಾರ ಸೆಕೆಂಡ್ ಶಿಫ್ಟ್‌ನಲ್ಲಿ ಪರೀಕ್ಷೆಗಳು ಆರಂಭವಾದ ನಂತರ ಗ್ರೂಪ್‌ನಲ್ಲಿ ಪ್ರಶ್ನೆಪತ್ರಿಕೆ ಹರಿದಾಡಿದೆ ಎನ್ನಲಾಗಿದೆ.
ಆಲ್ ಪ್ರಿನ್ಸಿಪಲ್ ಆಗ್ರಾ ಎನ್ನುವ ವಾಟ್ಸಾಪ್ ಗ್ರೂಪ್‌ನಲ್ಲಿ ಖುದ್ದು ಪ್ರಿನ್ಸಿಪಾಲ್ ಪ್ರಶ್ನೆ ಪತ್ರಿಕೆ ಕಳುಹಿಸಿದ್ದಾರೆ ಎಂದು ಆರೋಪಿಸಿ ಸಿಕ್ರಿಯಲ್ಲಿ ದೂರು ದಾಖಲಿಸಲಾಗಿದೆ.