ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದ ಆದಿಲಾಬಾದ್ ಜಿಲ್ಲೆಯ ಮಂಗುರ್ಲಾ ಗ್ರಾಮದಲ್ಲಿ ಪರೀಕ್ಷೆಗೆ ತಡವಾಗಿ ಬಂದಿದ್ದ ವಿದ್ಯಾರ್ಥಿಯೊಬ್ಬ, ಪರೀಕ್ಷೆ ಬರೆಯಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ವಿದ್ಯಾರ್ಥಿಯು ಪರೀಕ್ಷಾ ಕೊಠಡಿಗೆ ತಡವಾಗಿ ಬಂದಿದ್ದರಿಂದ ಪರೀಕ್ಷೆ ಬರೆಯಲು ಅವಕಾಶವಿರಲಿಲ್ಲ. ಇದರಿಂದ ಬೇಸರಗೊಂಡ ವಿದ್ಯಾರ್ಥಿ ಆತ್ಮಹತ್ಯೆ ಪತ್ರ ಬರೆದು ನೀರಾವರಿ ಕಾಲುವೆಗೆ ಹಾರಿ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ.
ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದಿದ್ದರಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದಿದ್ದಕ್ಕಾಗಿ ವಿದ್ಯಾರ್ಥಿಯು ಆತ್ಮಹತ್ಯೆ ಪತ್ರದಲ್ಲಿ ತನ್ನ ತಂದೆಯಲ್ಲಿ ಕ್ಷಮೆಯಾಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.