ಹೊಸದಿಗಂತ , ಕಲಬುರಗಿ:
ಬಿಜೆಪಿ ಕಾರ್ಯಕರ್ತರ ಸರಣಿ ಕೊಲೆಗಳನ್ನು ನೋಡಿದರೆ, ಜಿಲ್ಲೆಯಲ್ಲಿನ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಫಲವಾಗಿದ್ದಾರೆ ಎಂದು ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಹೇಳಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯಷ್ಟೇ ಆಳಂದ ತಾಲೂಕಿನ ಬಿಜೆಪಿ ಕಾರ್ಯಕರ್ತನನ್ನು ಮೂವರು ಅಪರಿಚಿತ ದುಷ್ಕರ್ಮಿಗಳು ರಾಡ್,ತಲ್ವಾರ್ ಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮಾಸುತ್ತಲೇ, ಇಂದು ಮತೊಬ್ಬ ಬಿಜೆಪಿ ಕಾರ್ಯಕರ್ತ ಗಿರೀಶ್ ಚಕ್ರ ಅವರ ಬರ್ಬರವಾಗಿ ಕೊಲೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕೆಟ್ಟು ಹೋಗಿದೆ ಎಂದರು.
ಜಿಲ್ಲೆಯಾದ್ಯಂತ ನಡೆಯುತ್ತಿರುವ ಕೊಲೆಯಿಂದ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಕುರಿತು ಈಗಾಗಲೇ ಐಜಿ ಮತ್ತು ಎಸ್ಪಿಯವರಿಗೆ ಮಾತನಾಡಿದ್ದೇನೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಬಿಜೆಪಿ ಕಾರ್ಯಕರ್ತರ ಕೊಲೆಯಾಗಿ ಉತ್ತರಿಸುವುದು ಚಿಂತಾಜನಕವಾಗಿದ್ದು, ಲೋಕಸಭಾ ಚುನಾವಣೆ ಮುಗಿಯುವವರೆಗೂ ಕಲಬುರಗಿಯಲ್ಲಿ ಮಿಲಿಟರಿ ಫೋರ್ಸ್ ತಂದು, ಚುನಾವಣೆ ಮುಗಿಯುವವರೆಗೂ ಇಲ್ಲೆ ಇರಬೇಕು ಎಂದು ಹೇಳಿದರು.
ಇನ್ನೂ ಕೊಲೆಯಾಗಿರುವ ಬಿಜೆಪಿ ಮುಖಂಡ ಗಿರೀಶ್ ಚಕ್ರ ನನ್ನ ಮಗನಿಗಿಂತ ಹೆಚ್ಚಾಗಿದ್ದನು. ದೇಶದ ಬಗ್ಗೆ ಹೆಚ್ಚು ಚಿಂತನೆ ಮಾಡುವ ಸ್ವಭಾವ ಹೊಂದಿರುವ ಯುವಕನಾಗಿದ್ದನು.ಮೇಲಾಗಿ ಆತ ತಂದೆ ತಾಯಿ ಇಲ್ಲದ ತಬ್ಬಲಿಯಾಗಿದ್ದ.ಆತನ ಕೊಲೆಯಿಂದ ಬಹಳ ನೋವಾಗಿದೆ ತಮ್ಮ ಅಳಲನ್ನು ತೋಡಿಕೊಂಡರು.