ಹೊಸದಿಗಂತ ವರದಿ ಹುಬ್ಬಳ್ಳಿ:
ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸಿದ ಉಪರಾಷ್ಟ್ರ ಪತಿ ಜಗದೀಪ ಧನಕರ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಇಲ್ಲಿಯ ಗೋಕುಲ ರಸ್ತೆಯ ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಶಾಸಕ ಎಂ. ಆರ್. ಪಾಟೀಲ, ಮೇಯರ್ ವೀಣಾ ಬರದ್ವಾಡ, ಜಿಲ್ಲಾಕಾರಿ ದಿವ್ಯಪ್ರಭು, ಹು-ಧಾ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಜಿಲ್ಲಾ ವರಿಷ್ಠ ಪೊಲೀಸ್ ಅಕಾರಿ ಗೋಪಾಲ ಬ್ಯಾಕೋಡ್ ಇದ್ದರು.
ಉಪರಾಷ್ಟ್ರ ಪತಿ ಜಗದೀಪ ಧನಕರ ನಗರಕ್ಕೆ ಪ್ರಪ್ರಥಮ ಬಾರಿಗೆ ಆಗಮಿಸಿದ್ದಾರೆ. ಧಾರವಾಡದ ಐಐಟಿ ಆವರಣದಲ್ಲಿ ಕೇಂದ್ರೀಯ ಕಲಿಕಾ ಥಿಯೇಟರ್ ಹಾಗೂ ಸಂಪನ್ಮೂಲ ಜ್ಞಾನ ಹಾಗೂ ಡಾಟಾ ಕೇಂದ್ರ ಉದ್ಘಾಟಿಸುವರು. ಬಳಿಕ ಸಂಜೆ 5 ಗಂಟೆಗೆ ಹುಬ್ಬಳ್ಳಿಯ ಎಂ.ಎಂ. ಜೋಶಿ ನೂತನ ಐಸಿರಿ ಆಸ್ಪತ್ರೆಗೆ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.