ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ (Rameshwaram Cafe Blast) ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಘಟನೆ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಸ್ಥಳಕ್ಕೆ ‘NIA’ ತಂಡ ದೌಡಾಯಿಸಿದೆ.
ಸ್ಥಳಕ್ಕೆ ಧಾವಿಸಿದ ಎನ್ ಐ ಎ ತಂಡ ಪರಿಶೀಲನೆ ನಡೆಸಿ ನಂತರ ಗಾಯಾಳುಗಳ ಬಗ್ಗೆ ಮಾಹಿತಿ ಪಡೆಯುತ್ತಿದೆ.ಬ್ರೂಕ್ ಫೀಲ್ಡ್ ಆಸ್ಪತ್ರೆಗೆ ಭೇಟಿ ನೀಡಿದ ತಂಡ ವೈದ್ಯರ ಬಳಿ ಮಾಹಿತಿಗಳನ್ನು ಕಲೆಹಾಕುತ್ತಿದೆ.
ಇಂದಿರಾನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟಕ್ಕೆ ಒಂದೇ ಕಂಪನಿಯ ಐವರು ಸಹದ್ಯೋಗಿಗಳು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ .