ಹೊಸದಿಗಂತ ವರದಿ,ಶಿವಮೊಗ್ಗ:
ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ನಾನೇಂದ್ರ ಕಿಡಿಕಾರಿದ್ದಾರೆ.
ನಗರದಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿ, ಲಿಂಗಾಯತ-ವೀರಶೈವ ಧರ್ಮ ಎಂದು ಒಡಕು ಮೂಡಿಸಲು ಯತ್ನಿಸಿದರು. ನಂತರ ಟಿಪ್ಪು ಜಯಂತಿ ಆಚರಣೆಗೆ ತಂದರು. ಈಗ ಜಾತಿ ಗಣತಿ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸಕ್ಕೆ ಹೈ ಹಾಕಿದ್ದಾರೆ. ಆ ಮೂಲಕ ಶಾಶ್ವತ ರಾಜಕೀಯ ಸಾವ್ರಾಜ್ಯ ಕಟ್ಟುತ್ತೇನೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ಜಾತಿ ಗಣತಿ ಅವೈಜ್ಞಾನಿಕ ವಾಗಿದೆ, ಸರಿಯಾಗಿ ಗಣತಿ ನಡೆದಿಲ್ಲ ಎಂದು ಲಿಂಗಾಯತ ಮಠಾಧಿಪತಿಗಳು, ಒಕ್ಕಲಿಗ ಸಮಾಜದ ಶ್ರೀಗಳು ಹೇಳಿದ್ದಾರೆ. ಆದರೂ ಸಿದ್ದರಾಮಯ್ಯ ಸೆಡ್ಡು ಹೊಡೆಯುತ್ತೇನೆ ಎಂಬಂತೆ ಜಾತಿ ಗಣತಿ ವರದಿ ಸ್ವೀಕಾರ ಮಾಡಿದ್ದಾರೆ ಎಂದರು.