ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಧಾರಾವಾಹಿ ‘ನಾಗಿಣಿ’ ಖ್ಯಾತಿಯ ನಟಿ ದೀಪಿಕಾ ದಾಸ್ ಸದ್ದಿಲ್ಲದೆ ಗೋವಾದಲ್ಲಿ ದಾಂಪತ್ಯಜೀವನಕ್ಕೆ ಕಾಲಿಟ್ಟಿದ್ದಾರೆ. ಬೀಚ್ ಸೈಡ್ ವೆಡ್ಡಿಂಗ್ ಫೊಟೋ ಶೇರ್ ಮಾಡಿದ ನಾಗಿಣಿ ಸೀರಿಯಲ್ ಖ್ಯಾತಿಯ ನಟಿ ಎಲ್ಲರಿಗೂ ಶಾಕ್ ಕೊಟ್ಟಿದ್ದಾರೆ.
ಇದು ಮದುವೆಯಾ? ಅಥವಾ ಆ್ಯಡ್ ಶೂಟಿಂಗ್ ಫೋಟೋಗಳಾ ಎಂದು ಕನ್ಫ್ಯೂಸ್ ಆಗಿದ್ದಾರೆ. ಆದರೆ ಪೋಸ್ಟ್ ನೋಡಿದರೆ ರಿಯಲ್ ಮದುವೆಯಂತಿದೆ.
ದುಬೈನಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಉದ್ಯಮಿ ಜೊತೆ ದೀಪಿಕಾ ದಾಸ್ ಮದುವೆ ಆಗಿದ್ದಾರೆ. ಗೋವಾನಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ನಡೆದಿದೆ.ತಮ್ಮ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಗೋವಾದ ಕಡಲ ತಡಿಯಲ್ಲಿ ಖಾಸಗಿಯಾಗಿ ವಿವಾಹ ಕಾರ್ಯಕ್ರಮ ನಡೆದಿದ್ದು, ವಧು-ವರರ ಕುಟುಂಬ ಸದಸ್ಯರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು.
ವರನ ಕೈಯನ್ನು ಹಿಡಿದು ದೀಪಿಕಾ ದಾಸ್ ಅವರು ತುಂಬಾ ಖುಷಿಯಿಂದ ಹೆಜ್ಜೆ ಹಾಕಿದ್ದಾರೆ. ಸಾಂಪ್ರದಾಯಿಕ ಶೈಲಿಯಲ್ಲಿ ರೆಡಿಯಾಗಿದ್ದ ದೀಪಿಕಾ ಅವರ ಲುಕ್ ಆಕರ್ಷಕವಾಗಿತ್ತು. ಅವರ ಫೋಟೋಸ್ ನೋಡಿ ನೆಟ್ಟಿಗರು ಸ್ವೀಟ್ ಶಾಕ್ಗೆ ಒಳಗಾಗಿದ್ದಾರೆ.
ದೀಪಿಕಾ ದಾಸ್ ‘ನಾಗಿಣಿ’ ಧಾರಾವಾಹಿ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದರು. ಬಿಗ್ಬಾಸ್ ಕನ್ನಡದಲ್ಲಿ ಸ್ಪರ್ಧಿಯಾಗಿಯೂ ಭಾಗಿಯಾಗಿದ್ದರು.
ಇದೀಗ ತಮ್ಮ ಮದುವೆಯ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ದೀಪಿಕಾ ದಾಸ್, ‘ಸಾಹಸಮಯ ಪ್ರಯಾಣಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.
ದೀಪಿಕಾ ಅವರು ಕಮೆಂಟ್ ಬಾಕ್ಸ್ ಆಫ್ ಮಾಡಿಟ್ಟಿದ್ದು ಸದ್ಯ ಅಭಿಮಾನಿಗಳ ಪ್ರಶ್ನೆಗಳನ್ನು ತಪ್ಪಿಸಲು ಹೀಗೆ ಮಾಡಿರುವಂತೆ ಕಂಡುಬಂದಿದೆ.