ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಂದಲಹಳ್ಳಿ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಗುಪ್ತಚರ ದಳ ಬಂಧಿಸಿದೆ. ಈ ವೇಳೆ ಆರೋಪಿ ಸೇರಿದಂತೆ ಇನ್ನೂ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಇದೆ.
ಸಿಸಿಟಿವಿ ಕ್ಯಾಮೆರಾಗಳ ಪ್ರಕಾರ, ಶಂಕಿತ ವ್ಯಕ್ತಿ ತನ್ನ ಮುಖಕ್ಕೆ ಮಾಸ್ಕ್ ಮತ್ತು ತಲೆಗೆ ಕ್ಯಾಪ್ ಧರಿಸಿದ್ದ. ಘಟನೆಗೆ ಸಂಬಂಧಿಸಿದಂತೆ ಗುಪ್ತಚರ ತಂಡ ಒಟ್ಟು ನಾಲ್ವರನ್ನು ಬಂಧಿಸಿದೆ. ಶಂಕಿತರು ಇದನ್ನೆಲ್ಲಾ ಏಕೆ ಮಾಡಿದ್ದಾರೆ ಎಂಬುದು ತನಿಖೆಯ ನಂತರ ಸ್ಪಷ್ಟವಾಗಲಿದೆ.