ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ ಯುವರಾಜ್ ಸಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಭಾರತದ ಮಾಜಿ ಆಟಗಾರ ಯುವರಾಜ್ ಸಿಂಗ್ ಹೇಳಿದ್ದಾರೆ. ಇತ್ತೀಚೆಗೆ ಯುವರಾಜ್ ಸಿಂಗ್ ತಮ್ಮ ಕುಟುಂಬ ಸಮೇತ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದರು. ಈ ಸಭೆಯ ಸ್ವಲ್ಪ ಸಮಯದ ನಂತರ, ಯುವರಾಜ್ ಸಿಂಗ್ ಬಿಜೆಪಿಗೆ ಸ್ಪರ್ಧಿಸುತ್ತಿದ್ದಾರೆ ಎಂದು ಘೋಷಿಸಲಾಗಿತ್ತು.

ಯುವರಾಜ್ ಸಿಂಗ್ ಪಂಜಾಬ್‌ನ ಗುರುದಾಸ್​ಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಬಹುದು, ಅದಕ್ಕಾಗಿ ಅವರು ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ವರದಿಯಾಗಿತ್ತು. ಆದರೆ ಇದೀಗ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಯುವರಾಜ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ನಾನು ಗುರುದಾಸ್​ಪುರ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ಜನರನ್ನು ವಿವಿಧ ರೀತಿಯಲ್ಲಿ ಬೆಂಬಲಿಸಲು ಮತ್ತು ಸಹಾಯ ಮಾಡಲು ಬಯಸುತ್ತೇನೆ. ಅದನ್ನು YOUWECAN ಫೌಂಡೇಷನ್ ಮೂಲಕ ಮುಂದುವರಿಸುತ್ತೇನೆ ಎಂದು ಯುವರಾಜ್ ಸಿಂಗ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!