ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೊ ನ್ಯಾಯ ಯಾತ್ರೆಯು ಶನಿವಾರ ಮಧ್ಯಾಹ್ನ ಮಧ್ಯಪ್ರದೇಶಕ್ಕೆ ಪ್ರವೇಶ ಮಾಡಿದೆ.
ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಅವರು ಮೊರೆನಾ ಜಿಲ್ಲೆಯ ಗಡಿಯಲ್ಲಿ ರಾಹುಲ್ ಗಾಂಧಿ ಅವರನ್ನು ರಾಜ್ಯಕ್ಕೆ ಬರಮಾಡಿಕೊಂಡರು.
ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಕೂಡ ಇದ್ದರು.
ಮೊರೆನಾ ನಗರದ ಭೀಮರಾಮ್ ಅಂಬೇಡ್ಕರ್ ಸ್ಟೇಡಿಯಂನಲ್ಲಿ ಧ್ವಜ ಹಸ್ತಾಂತರ ಸಮಾರಂಭ ನಡೆಯಿತು.ಮೊರೇನಾ, ಗ್ವಾಲಿಯರ್, ಗುನಾ, ರಾಜಗಢ, ಶಾಜಾಪುರ, ಉಜ್ಜಯಿನಿ, ಧಾರ್ ಹಾಗೂ ರಟ್ಲಂ ಜಿಲ್ಲೆಗಳಲ್ಲಿ ಯಾತ್ರೆ ಸಾಗಲಿದ್ದು, ಮಾ. 6ಕ್ಕೆ ಮತ್ತೆ ರಾಜಸ್ಥಾನವನ್ನು ಪ್ರವೇಶಿಸಲಿದೆ.