ನನ್ನ ಹೆಂಡತಿ ಶಾಸಕಿ, ಸಂಸದೆಯಾಗಿ ಆಯ್ಕೆಯಾಗಲಿ ಎಂಬ ಆಸೆ ನನಗೂ ಇದೆ: ನಟ ಶಿವರಾಜ್ ಕುಮಾರ್

ಹೊಸದಿಗಂತ ವರದಿ, ಶಿವಮೊಗ್ಗ :

ಒಬ್ಬ ಗಂಡನಾಗಿ ನನ್ನ ಹೆಂಡತಿ ಶಾಸಕಿ ಸಂಸದೆಯಾಗಿ ಆಯ್ಕೆಯಾಗಲಿ ಎಂಬ ಆಸೆ ನನಗೂ ಇದೆ ಎಂದು ನಟ ಶಿವರಾಜ್ ಕುಮಾರ್ ತಮ್ಮ ಆಶಯವನ್ನು ಹಾಕಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ, ಗೀತಾ ಶಿವರಾಜಕುಮಾರ್ ಈಗಾಗ್ಲೇ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ಶಾಸಕ ಅಥವಾ ಸಂಸದೆಯಾಗಿ ಆಯ್ಕೆಯಾದರೆ ಮಹಿಳೆಯರಿಗೊಂದು ಸ್ಪೂರ್ತಿ ದೊರೆಯಲಿದೆ. ಇದಕ್ಕಾಗಿ ಜನಪ್ರತಿನಿಧಿ ಆಗಬೇಕು ಎಂಬ ಆಶಯ ಇದೆ ಎಂದರು.

ಗೀತಾ ಶಿವರಾಜಕುಮಾರ್ ಅವರನ್ನು ಒಬ್ಬ ಸೆಲೆಬ್ರಿಟಿ ಆಗಿ ನೋಡುವ ಅಗತ್ಯ ಇಲ್ಲ. ಸಮಾಜ ಸೇವೆಯಲ್ಲಿ ಎಲ್ಲರ ಜೊತೆಗೆ ಬೆರೆಯುತ್ತಿದ್ದಾರೆ. ರಾಜಕೀಯ ಕುಟುಂಬದಿಂದ ಆಕೆ ಬಂದಿರುವುದರಿಂದ ಸಹಜವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಆಶಯ ಹೊಂದಿದ್ದಾರೆ ಎಂದರು.

ಪಕ್ಷದ ಹೈಕಮಾಂಡ್ ಅವಕಾಶ ನೀಡಿದರೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ. ಇಲ್ಲವಾದರೆ ಬೇಸರವಿಲ್ಲ. ನಾವು ಯಾವುದಕ್ಕೂ ಸಿದ್ಧ ಇದ್ದೇವೆ. ಚುನಾವಣೆಯಲ್ಲಿ ಸ್ಪರ್ಧಿಸಿದರೆ ನನ್ನ ಬೆಂಬಲ ಇರುತ್ತದೆ. ಪ್ರಚಾರಕ್ಕೂ ನಾನು ಬರುತ್ತೇನೆ. ಬೇರೆ ಕಡೆ ಬಂದರೆ ಸಿನಿಮಾ ಚಿತ್ರಿಕರಣದ ದಿನಗಳನ್ನು ನೋಡಿಕೊಂಡು ಪ್ರಚಾರ ನಡೆಸುತ್ತೇನೆ. ನಾನು ಸಿನಿಮಾರಂಗದಲ್ಲಿ ಇರುವುದರಿಂದ ಚುನಾವಣೆ ರಾಜಕೀಯಕ್ಕೆ ಬರುವ ಯಾವುದೇ ಉದ್ದೇಶ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!