ಕಾಂಗ್ರೆಸ್‌ ಗ್ಯಾರಂಟಿ ಸಮಾವೇಶ: ಕಾಫಿನಾಡಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿಕ್ಕಮಗಳೂರಿನಲ್ಲಿ ಇಂದು ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಚಿಕ್ಕಮಗಳೂರು ನಗರದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ನಗರದ ಸುಭಾಷ್​ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಆಗಮನದ ಹಿನ್ನೆಲೆ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದಿಂದ ಸಮಾವೇಶದ ಸ್ಥಳದಲ್ಲಿ ಶೋಧ ನಡೆಸಲಾಗುತ್ತಿದೆ.

ಚಿಕ್ಕಮಗಳೂರು ಎಸ್​ಪಿ ವಿಕ್ರಂ ಆಮ್ಟೆ ನೇತೃತ್ವದಲ್ಲಿ ಗ್ಯಾರಂಟಿ ಸಮಾವೇಶ ನಡೆಯುವ ಸ್ಥಳ ಮತ್ತು ಸುತ್ತಮುತ್ತ ಸ್ಥಳಗಳನ್ನು ಪರಿಶೀಲನೆ ನಡೆಸಲಾಗಿದೆ. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕೆಜೆ ಜಾರ್ಜ್ ಭಾಗವಹಿಸಲಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಐದು ಕ್ಷೇತ್ರಗಳ ಫಲಾನುಭವಿಗಳು ಕೂಡ ಭಾಗವಹಿಸಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!