ಹೊಸದಿಗಂತ , ವಿಜಯನಗರ:
ಹಂಪಿ ಕನ್ನಡ ವಿಶ್ವವಿದ್ಯಾಲಯ ಮೂಲ ಸೌಕರ್ಯದಿಂದ ವಂಚನೆಯಾಗಿದೆ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಯಿಂದ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಶ್ನೆಗೆ ಉತ್ತರಿಸದೇ ನಿರ್ಗಮಿಸಿದರು.
ಹೊಸಪೇಟೆ ತಾಲೂಕಿನ ಕಮಲಾಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಜ್ಯ ಮಟ್ಟದ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕನ್ನಡ ವಿಶ್ವ ವಿದ್ಯಾಲಯ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದೆ. ಮೂಲ ಸೌಕರ್ಯದಿಂದ ವಂಚಿತವಾಗಿದೆಯಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕನ್ನಡ ವಿವಿ ಸ್ಥಿತಿಗೆ ಯಾರು ಕಾರಣ ನೀವೇ ಹೇಳಿ ಎಂದು ಗದರಿ, ಹೊರ ನಡೆದರು.
ಇದಕ್ಕೂ ಮುನ್ನ ಮಾತನಾಡಿದ ಅವರು, ಬೆಂಗಳೂರಿನ ಬಾಂಬ್ ಸ್ಪೋಟ ಪ್ರಕರಣ ಸದ್ಯ ಸಿಸಿಬಿ ಪೊಲೀಸರ ತನಿಖೆಯಲ್ಲಿದೆ. ಎನ್ಐಎ ಗೆ ತನಿಖೆ ಹೊಣೆ ವಹಿಸುವ ಬಗ್ಗೆ ಇನ್ನು ನಿರ್ದಾರ ಮಾಡಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆವರೆಗೂ ಯಾರನ್ನು ಬಂಧಿಸಿಲ್ಲ. ಈಗ ಏನಾಗಿದೆ ಇನ್ನಷ್ಟೇ ಪೊಲೀಸರಿಂದ ಮಾಹಿತಿ ಪಡೆಯುತ್ತೇನೆ ಎಂದರು.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಪ್ರಕರಣ ಇನ್ನು ವಿಚಾರಣೆಯಲ್ಲಿದೆ ಎಫ್ಎಸ್ ಎಲ್ ವರದಿ ಇನ್ನು ಸರಕಾರದ ಕೈ ಸೇರಿಲ್ಲ. ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.