ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ತಾಯಿಯೊಬ್ಬಳು ತನ್ನ 4 ವರ್ಷದ ಮಗುವಿಗೆ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ತಾಯಿ ಮತ್ತು ಆಕೆಯ ಬಾಯ್ ಫ್ರೆಂಡ್ ಪ್ರತಿದಿನ ಮಗುವಿನ ಮೇಲೆ ಹಲ್ಲೆ ನಡೆಸಿ ಅಮಾನುಷ ಕೃತ್ಯ ಮೆರೆದಿದ್ದಾರೆ.
ತಾಯಿ ನಡೆಸಿರುವ ಹಲ್ಲೆಯಿಂದ ಮಗುವಿಗೆ ದೇಹದ ತುಂಬೆಲ್ಲ ಗಾಯವಾಗಿದೆ. ತಾಯಿ ತನ್ನ ಮಗುವನ್ನು ಮನೆಯಲ್ಲಿ ಬಿಟ್ಟು ಬೆಳಿಗ್ಗೆ ಕೆಲಸಕ್ಕೆ ಹೋದಾರೆ, ರಾತ್ರಿ ಬರೋವರೆಗೂ ಕೂಡಿ ಹಾಕಿರುತ್ತಾಳೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ವಿಚಾರ ತಿಳಿದ ಸಂಘಟನೆಗಳು ಮನೆಗೆ ಬಂದು ಮಗುವಿನ ರಕ್ಷಣೆ ಮಾಡಿದ್ದಾರೆ.
ಘಟನೆಯ ಬಗ್ಗೆ ಸಿಡಬ್ಲ್ಯುಸಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಅತ್ತ ಪೊಲೀಸರು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಕೊನೆಗೆ ಕಂದಮನನ್ನ ಸಂಘಟನೆಯವರೇ ನೆರವಿಗೆ ಬಂದು ಮಗುವನ್ನ ಶಿಶು ಮಂದಿರಕ್ಕೆ ಕಳುಹಿಸಿಕೊಡಲಾಗಿದೆ ಎಂದಿದ್ದಾರೆ.