ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೊನ್ನಂಪೇಟೆ, ಕಾನೂರು ನಡುವಿನ ಮುಗುಟಗೇರಿ ಮುಖ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರಾನ್ಸ್ ಫಾರ್ಮರ್ ಅಳವಡಿಸಿದ್ದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಮುಂದೆ ಸಾಗುತ್ತಿದ್ದ ಕಾರೊಂದು ಏಕಾಏಕಿ ಎಡಕ್ಕೆ ತಿರುಗಿ ಟ್ರಾನ್ಸ್ ಫಾರ್ಮರ್ ಅಳವಡಿಸಿದ್ದ ಕಂಬಕ್ಕೆ ಸಿಲುಕಿ ಪಲ್ಟಿಯಾಗಿದೆ.
ಸದ್ಯ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು. ತಕ್ಷಣ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರಿಂದ ಅನಾಹುತ ತಪ್ಪಿಸಲಾಗಿದೆ. ಈ ಘಟನೆ ಕುರಿತು ಗೋಣಿಕೋಪ್ಪ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.