ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಸರಕಾರ ಸಿಸಿಬಿಗೆ ವಹಿಸಲಾಗಿದೆ.ಆರೋಪಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ.
ಇದರ ನಡುವೆ ಅಗತ್ಯ ಬಿದ್ದರೆ ಎನ್.ಐ.ಎ ಗೆ ವಹಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಈ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಅಗತ್ಯ ಬಿದ್ದರೆ ಎನ್.ಐ.ಎ ಗೆ ವಹಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು. ಬಾಂಬ್ ಸ್ಫೋಟದಂತಹ ಪ್ರಕರಣಗಳು ಸಣ್ಣ ಘಟನೆಗಳಾಗುವುದಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದರು.