ಪಾಕಿಸ್ತಾನದಲ್ಲಿ ಭಾರೀ ಮಳೆ: ಭೂಕುಸಿತ, 37 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದಾದ್ಯಂತ (Pakistan)ಭಾರೀ ಮಳೆಯಾಗುತ್ತಿದ್ದು, ಕನಿಷ್ಠ 37 ಜನ ಸಾವನ್ನಪ್ಪಿದ್ದಾರೆ .

ಪಾಕ್‍ನಲ್ಲಿ ಭಾರೀ ಮಳೆಯಿಂದಾಗಿ ಕೆಲವೆಡೆ ಮನೆ ಹಾಗೂ ಭೂಕುಸಿತ ಉಂಟಾಗಿದೆ. ಅಲ್ಲದೇ ರಸ್ತೆಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಬಜೌರ್, ಸ್ವಾತ್, ಲೋವರ್ ದಿರ್, ಮಲಕಾಂಡ್, ಖೈಬರ್, ಪೇಶಾವರ್, ವಜೀರಿಸ್ತಾನ್ ಮತ್ತು ಲಕ್ಕಿ ಮಾರ್ವತ್ ಸೇರಿದಂತೆ ಹತ್ತು ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಈ ಅನಾಹುತ ಸಂಭವಿಸಿದೆ.

ಹಲವಾರು ಜನ ಮಳೆ ಸಂಬಂಧಿತ ಅನಾಹುತಗಳಿಂದ ಗಾಯಗೊಂಡಿದ್ದಾರೆ. ಮೃತರಲ್ಲಿ ಮಕ್ಕಳ ಸಂಖ್ಯೆಯೇ ಹೆಚ್ಚಾಗಿದೆ. ಸೂಕ್ತ ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!