ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆ ರಾಷ್ಟ್ರೀಯ ತನಿಖಾ ದಳಕ್ಕೆ ವರ್ಗಾವಣೆಯಾಗಿದೆ.
ಸೋಮವಾರ ಮಧ್ಯಾಹ್ನ ಎನ್‌ಐಎ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿಕೊಂಡಿದ್ದು, ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆ ಆರಂಭವಾಗಲಿದೆ.
ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿ ಈಗಾಗಲೇ ಎರಡು ದಿನ ಕಳೆದಿವೆ. ಶಂಕಿತ ಉಗ್ರನ ಫೋಟೊ, ವಿಡಿಯೋಗಳು ಸಿಸಿ ಕ್ಯಾಮೆರಾಗಳಲ್ಲಿ ಸಿಕ್ಕಿದೆ. ಎಷ್ಟು ಹುಡುಕಿದರೂ ಆರೋಪಿ ಸಿಗದೇ ತಲೆಮರೆಸಿಕೊಂಡಿದ್ದಾನೆ.
ಇದೀಗ ಅಧಿಕೃತವಾಗಿ ಎನ್‌ಐಎ ಎಂಟ್ರಿ ನೀಡಿದ್ದು, ಕೆಲವೇ ದಿನಗಳಲ್ಲಿ ಶಂಕಿತ ಉಗ್ರನ ಬಂಧನವಾಗಲಿದೆ.