ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ 20 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಸುಲಭವಾಗಿ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಲೋಕಸಭೆ ಚುನಾವಣೆಗೆ ತಯಾರಾಗಿದೆ. ನಮ್ಮ ಕಾರ್ಯಕರ್ತರು ಬಿಡುವಿಲ್ಲದಂತೆ ಶ್ರಮಿಸುತ್ತಿದ್ದಾರೆ ಎಂದಿದ್ದಾರೆ.
ಈ ಬಾರಿ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದಾರೆ. ಬರಗಾಲದ ಬಗ್ಗೆ ಪ್ರಶ್ನೆ ಎದುರಾದಾಗ, ಚಿಕ್ಕಮಗಳೂರು ತಾಲೂಕನ್ನು ಬರಪಟ್ಟಿಗೆ ಸೇರಿಸಲು ಹಲವಾರು ಮಾನದಂಡಗಳಿವೆ, ಅದರಂತೆ ಇಲ್ಲಿನ 17 ತಾಲೂಕುಗಳು ಬರ ಪಟ್ಟಿಯಿಂದ ಹೊರಗಿವೆ ಎಂದು ಹೇಳಿದ್ದಾರೆ.