ಹೊಸದಿಗಂತ ವರದಿ ಶಿವಮೊಗ್ಗ:
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ಸಂಬಂ‘ ಎಫ್‌ಎಸ್‌ಎಲ್ ವರದಿಯನ್ನು ಏಕೆ ಬಚ್ಚಿಟ್ಟುಕೊಂಡಿದ್ದಾರೋ ಗೊತ್ತಿಲ್ಲ. ಎಫ್‌ಎಸ್‌ಎಲ್ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಬಹಿರಂಗಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿ, ವಿಧಾನಸೌ‘ಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ಕುರಿತು ಖಾಸಗಿ ಸಂಸ್ಥೆಯೊಂದು ಎಫ್‌ಎಸ್‌ಎಲ್ ವರದಿ ನೀಡಿದೆ. ವರದಿ ಘೋಷಣೆ ಕೂಗಿರುವುದು ಸತ್ಯ ಎಂದಿದೆ. ಸರ್ಕಾರದ ಪ್ರಯೋಗಾಲಯದ ವರದಿ ಬಂದು ಮೂರು ನಾಲ್ಕು ದಿನಗಳು ಕಳೆದರೂ ಬಿಡುಗಡೆಯಾಗಿಲ್ಲ. ಎಫ್‌ಎಸ್‌ಎಲ್ ವರದಿ ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.
ವಾಸ್ತವಿಕ ಸಂಗತಿ ದೇಶ ಹಾಗೂ ರಾಜ್ಯದ ಜನರಿಗೆ ಗೊತ್ತಾಗಬೇಕು. ವಿಳಂಬವಾದರೆ ಕ್ರಮ ಕೈಗೊಳ್ಳಲು ವಿಳಂಬವಾಗುತ್ತದೆ ಎಂದರು.