ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ಬರಲಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಅವರು ಸೋಮವಾರ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನುಪುನರುಚ್ಚರಿಸಿದ ಅವರು, ಇದು ಅತ್ಯಂತ ಅಗತ್ಯವಾದ ಸಾಂವಿಧಾನಿಕ ಪ್ರಕ್ರಿಯೆಯಾಗಿದೆ ಮತ್ತು ಅದನ್ನು ಕಾರ್ಯಗತಗೊಳಿಸುವುದು ನಮಗೆ ಮುಖ್ಯವಾಗಿದೆ ಎಂದು ವಿವರಿಸಿದರು.
ನಾವು ಗಡಿಯಾಚೆಯಿಂದ ಬರುವ ಜನರಿಗೆ ಆಶ್ರಯ ನೀಡಬೇಕು ಮತ್ತು ಅವರು ಇಲ್ಲಿಯೇ ಉಳಿದುಕೊಳ್ಳಬೇಕು. ಸಿಎಎ ಪ್ರಸ್ತುತ ಇರುವ ನಾಗರಿಕರ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ. ಸಿಎಎ ಅನ್ನು ರಾಜ್ಯ ಸರ್ಕಾರಗಳ ಯಾವುದೇ ಪಾತ್ರವಿಲ್ಲದ ರೀತಿಯಲ್ಲಿ ಜಾರಿಗೊಳಿಸಲಾಗುವುದು. ದೇಶದಲ್ಲಿ ಗೊಂದಲದ ವಾತಾವರಣವನ್ನು ಸೃಷ್ಟಿಸಲು ಅವರಿಗೆ ಯಾವುದೇ ಅವಕಾಶ ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.
ಈ ವರ್ಷದ ಫೆಬ್ರವರಿಯಲ್ಲಿ ಅಮಿತ್ ಶಾ ಅವರು ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಅಧಿಸೂಚನೆಯನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದ್ದರು.