ಹೊಸದಿಗಂತ ವರದಿ ಕಲಬುರಗಿ:
ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯತೀಂದ್ರ ವಿರುದ್ಧ ಇನ್ಸ್ಟಾಗ್ರಾಮ್ ನಲ್ಲಿ ಅವಹೇಳನಕಾರಿಯಾಗಿ ಪದವನ್ನು ಬಳಸಿ ಎಡಿಟ್ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಮೂವರು ನಾಯಕರ ಭಾಷಣದ ತುಣುಕಿಗೆ ಅವಹೇಳನಕಾರಿ ಪದ ಬಳಸಿ ಗುಲಾಮ್ ಗ್ಯಾಂಗ್, ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಹರಿಬಿಟ್ಟಿದ್ದು, ವಿಡಿಯೋ ಬೆಳಕಿಗೆ ಬರುತ್ತಿದ್ದಂತೆ, ಗುಲಾಮ್ ಗ್ಯಾಂಗ್ ಇನ್ಸ್ಟಾಗ್ರಾಮ್ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ.
ಯೂತ್ ಕಾಂಗ್ರೆಸ್ ಉಪಾಧ್ಯಕ್ಷ ಅಮರನಾಥ ನೀಡಿದ ದೂರಿನ ಮೇರೆಗೆ ಕಲಬುರಗಿ ಸೆನ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಿಯಾಂಕ್ ಖರ್ಗೆ, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಅವರನ್ನು ಟ್ರೊಲ್ ಮಾಡಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಅವರ ಅಭಿಮಾನಿಗಳಿಗೆ ಬೇಸರವುಂಟಾಗಿದೆ ಎಂದು ತಿಳಿಸಿದ್ದಾರೆ.
ಕೂಡಲೇ ಸಾಮಾಜಿಕ ಜಾಲತಾಣವಾಗಿರುವ ಇನ್ಸ್ಟಾಗ್ರಾಮ್ ನಲ್ಲಿ ಭಾಷಣದ ತುಣುಕಿಗೆ ಎಡಿಟ್ ಮಾಡಿ ಹರಿಬಿಟ್ಟ ಗುಲಾಮ್ ಗ್ಯಾಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಮರನಾಥ ಆಗ್ರಹಿಸಿದ್ದಾರೆ.