ಹೊಸದಿಗಂತ ವರದಿ, ಬನವಾಸಿ:
ಕದಂಬೋತ್ಸವ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿನ ಐತಿಹಾಸಿಕ ಶ್ರೀ ಮಧುಕೇಶ್ವರ ದೇವಸ್ಥಾನಕ್ಕೆ ತೆರಳಿ ವಿಷೇಶ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಶ್ರೀ ಮಧುಕೇಶ್ವರ ದೇವಸ್ಥಾನ ಆಡಳಿತ ಮಂಡಳಿಯಿಂದ ಶ್ರೀ ಮಧುಕೇಶ್ವರ ದೇವಸ್ಥಾನದ ನೂತನ ರಥ ನಿರ್ಮಾಣಕ್ಕಾಗಿ ಸರ್ಕಾರ ಮಂಜೂರು ಮಾಡಿರುವ 3ಕೋಟಿ ರೂ. ಗಳಲ್ಲಿ ಉಳಿದ 1.50 ಕೋಟಿ ರೂ ಮಂಜೂರು ಮಾಡುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಆಡಳಿತ ಸುಧಾರಣಾ ಅಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ, ಎಮ್.ಸಿ.ಎ ಸತೀಶ್ ಸೈಲ್, ಶಾಸಕ ಶಿವರಾಮ ಹೆಬ್ಬಾರ್, ಭೀಮಣ್ಣ ನಾಯ್ಕ್, ಮಾಜಿ ಶಾಸಕಿ ಅಂಜಲಿ ನಿಂಬಾಲ್ಕರ್, ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರಾಜಶೇಖರ ಒಡೆಯರ್ ಮತ್ತಿತರರು ಇದ್ದರು.