ಗಾಜಾ ಸಂಘರ್ಷದಿಂದ ತೊಂದರೆ: ವಿಶ್ವಸಂಸ್ಥೆಯಲ್ಲಿ ಕಳವಳ ವ್ಯಕ್ತಪಡಿಸಿದ ಭಾರತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಐದು ತಿಂಗಳಿಂದ ಗಾಜಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಭಾರತೀಯರಿಗೆ ತೀವ್ರ ತೊಂದರೆಗೀಡಾಗಿದೆ ಎಂದು ವಿಶ್ವಸಂಸ್ಥೆಯಲ್ಲಿರುವ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ ಕಳವಳ ವ್ಯಕ್ತಪಡಿಸಿದರು.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ವೀಟೊ ಬಳಕೆ ಕುರಿತು ಸೋಮವಾರ ಮಾತನಾಡಿದ ಅವರು, ಈ ಸಂಘರ್ಷದಿಂದ ನಾಗರಿಕರ ಸಾವು-ನೋವುಗಳು ಸಂಭವಿಸುತ್ತಿದ್ದು, ಮಾನವೀಯ ಬಿಕ್ಕಟ್ಟು ಸೃಷ್ಟಿಯಾಗಿದೆ.ಇದು ಸ್ವೀಕಾರಾರ್ಹವಲ್ಲ’ ಎಂದು ಅವರು ಪ್ರತಿಪಾದಿಸಿದರು.

‘ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷವು ವಿಶೇಷವಾಗಿ ಮಕ್ಕಳು, ಮಹಿಳೆಯರು ಸೇರಿದಂತೆ ನಾಗರಿಕರ ಸಾವುಗಳಿಗೆ ಕಾರಣವಾಗಿದೆ. ಈ ಮಾನವೀಯ ಬಿಕ್ಕಟ್ಟು ಆತಂಕ ಮೂಡಿಸಿದೆ’ ಎಂದು ಅವರು ಹೇಳಿದರು.

ಗಾಜಾದಲ್ಲಿ ಮಾನವೀಯ ದೃಷ್ಟಿಯಿಂದ ಕದನ ವಿರಾಮಕ್ಕೆ ಕರೆ ನೀಡುವ ನಿರ್ಣಯ ಅಂಗೀಕಾರಕ್ಕೆ ಭದ್ರತಾ ಮಂಡಳಿಯಲ್ಲಿ ಕಳೆದ ತಿಂಗಳು ಅಮೆರಿಕ ವೀಟೊ ಅಧಿಕಾರ ಚಲಾಯಿಸಿ ತಡೆ ನೀಡಿತ್ತು.ಈ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತದ ನಿಲುವನ್ನು ಸ್ಪಷ್ಟಪಡಿಸಿದ ಕಾಂಬೋಜ್ ಅವರು, ಸಂಘರ್ಷದಲ್ಲಿ ನಾಗರಿಕರ ಸಾವನ್ನು ಬಲವಾಗಿ ಖಂಡಿಸುತ್ತದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!