ಬಸ್​, ಕಾರು ನಡುವೆ ಭೀಕರ ರಸ್ತೆ ಅಪಘಾತ: ಐವರು ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹರಿಯಾಣದ ರೇವಾರಿಯಲ್ಲಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಹೇಂದ್ರಗಢದ ರಸ್ತೆಯೊಂದರಲ್ಲಿ ಮದುವೆ ಸಮಾರಂಭದಿಂದ ಐವರು ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಬಲೆನೊ ಕಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರು ಹರಿಯಾಣದ ಚಾರ್ಕಿ ದಾದ್ರಿಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!