ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಚಿನ್ನಾಭರಣ ಹಸ್ತಾಂತರಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸದ್ಯ ಬೆಂಗಳೂರಿನ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಅಕ್ರಮವಾಗಿ ಗಳಿಸಿದ್ದರು ಎನ್ನಲಾದ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಜಯಲಲಿತಾ ಪುತ್ರಿ ಜೆ.ದೀಪಾ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ವಿಚಾರಣೆ ನಡೆಸಿದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ಜಯಲಲಿತಾ ವಿರುದ್ಧದ ಭ್ರಷ್ಟಾಚಾರ ಆರೋಪ ಸಂಬಂಧ ಸುಪ್ರೀಂ ಕೋರ್ಟ್‌ನಿಂದ ತೀರ್ಪು ಬರುವ ಮುನ್ನವೇ ಅವರು ಮೃತರಾಗಿದ್ದರು. ಆದ ಕಾರಣ ಅವರನ್ನು ಆರೋಪ ಮುಕ್ತರು ಎಂದು ಸುಪ್ರಿಂ ತೀರ್ಪು ನೀಡಿದೆ.

ಆದ್ದರಿಂದ ಅರ್ಜಿದಾರರು ಜಯಲಲಿತಾ ಅವರ ಕಾನೂನುಬದ್ಧ ವಾರಸುದಾರರಾಗಿದ್ದು ಅವರ ಎಲ್ಲ ಚಿನ್ನಾಭರಣಗಳನ್ನು ಅರ್ಜಿದಾರರಿಗೆ ಹಸ್ತಾಂತರ ಮಾಡಬೇಕು ಎಂದು ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ನ್ಯಾಯಲಯವನ್ನು ಕೋರಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನಗರದ ವಿಶೇಷ ನ್ಯಾಯಾಲಯದಿಂದ ತಮಿಳುನಾಡು ಸರ್ಕಾರಕ್ಕೆ ಮಾ.6 ಆಗಬೇಕಾಗಿದ್ದ ಚಿನ್ನಾಭರಣಗಳ ಹಸ್ತಾಂತರ ಪ್ರಕ್ರಿಯೆಗೆ ತಡೆ ನೀಡಿದ್ದು, ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತಲ್ಲದೆ, ಮಾ.26ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!