ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಡಿಸೆಂಬರ್ 25ರಂದು ಕ್ರಿಸ್‌ಮಸ್ ಸಂಭ್ರಮದ ವೇಳೆ ಅರಮನೆ ಮುಂಭಾಗ ಬಲೂನ್ ತುಂಬುವ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿತ್ತು. ಈ ದುರ್ಘಟನೆಯಲ್ಲಿ ಸ್ಥಳದಲ್ಲೇ ಒಬ್ಬರು ಮೃತಪಟ್ಟಿದ್ದರು ಹಾಗೂ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ನಂತರದ ದಿನಗಳಲ್ಲಿ ಇಬ್ಬರು ಮೃತಪಟ್ಟಿದ್ದರು.
ಈ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಪ್ರಸ್ತುತ ಎನ್‌ಐಎ ತನಿಖೆ ನಡೆಸುತ್ತಿದೆ. ಇಂದು ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮೃತರ ಕುಟುಂಬದ ನೋವಿಗೆ ಸ್ಪಂದಿಸಿ ಆರ್ಥಿಕ ನೆರವು ಘೋಷಣೆ ಮಾಡಿದರು.


