ಸ್ಫೋಟ ಸಂಭವಿಸಿ ವಾರದ ನಂತರ ರಾಮೇಶ್ವರಂ ಕೆಫೆ ಮತ್ತೆ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಬ್ ಸ್ಫೋಟ ಸಂಭವಿಸಿದ ನಂತರ ಇದೀಗ ರಾಮೇಶ್ವರಂ ಕೆಫೆ ಮತ್ತೆ ಕಾರ್ಯಾರಂಭ ಮಾಡಿದೆ.

ಕೆಫೆಯಲ್ಲಿ ಬೆಳಗ್ಗೆಯಿಂದಲೇ ಪೂಜೆ ನಡೆಯುತ್ತಿದೆ. ಸದ್ಯ ಕೆಫೆ ಸುತ್ತಮುತ್ತ ಇದ್ದ ಬ್ಯಾರಿಕೇಡ್‌ಗಳನ್ನು ತೆರವು ಮಾಡಲಾಗಿದೆ.

ಪ್ರವೇಶ ದ್ವಾರದ ಬಳಿ ಮೆಟಲ್ ಡಿಕೆಕ್ಟರ್ ಅಳವಡಿಕೆ ಮಾಡಲಾಗಿದ್ದು, ಪ್ರತೀ ಗ್ರಾಹಕರೂ ಈ ದ್ವಾರದ ಮೂಲಕವೇ ಒಳಗೆ ಪ್ರವೇಶಿಸಬೇಕಿದೆ.

ಮಾರ್ಚ್1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಸಂಭವಿಸಿದ್ದು, ಐದು ಮಂದಿ ಗಾಯಗೊಂಡಿದ್ದರು. ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!