ಹೊಸದಿಗಂತ ವರದಿ ಹುಬ್ಬಳ್ಳಿ:
ಲೋಕಸಭಾ ಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಲಿದ್ದು, ಶೀಘ್ರದಲ್ಲೇ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟಿಕೆಟ್ ಹಂಚಿಕೆ ವಿಚಾರ ವರಿಷ್ಠರಿಗೆ ಬಿಟ್ಟಿದ್ದು, ಹಳಬರಿಗೆ ಬಿಟ್ಟು ಹೊಸಬರಿಗೆ ಟಿಕೆಟ್ ನೀಡುತ್ತಾರೆ ಎಂಬುವುದು ಕೇವಲ ಊಹಾಪೋಹಗಳಾಗಿವೆ. ಇದಕ್ಕೆ ನಾವು ಪ್ರತಿಕ್ರಿಯೆ ನೀಡಲ್ಲ ಎಂದರು.
ವಿಧಾನ ಸಭೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ವ್ಯಕ್ತಿ ಕಾಂಗ್ರೆಸ್ ಬಹಳ ಆಪ್ತನಾಗಿದ್ದಾನೆ. ಸಿಎಂ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಅವರೊಂದಿಗೆ ತೆಗೆಸಿಕೊಂಡಿರುವ ಚಿತ್ರಗಳು ವೈರಲ್ ಆಗಿವೆ ಎಂದರು.
ರಾಜ್ಯ ಸಭಾ ಸದಸ್ಯ ಸಯ್ಯದ ನಾಸೀರ್ ಹುಸೇನ್ ಪಕ್ಕದಲ್ಲಿ ನಿಂತು ಪಾಕ್ ಪರ ಘೋಷಣೆ ಕೂಗಿದರು ಸುಮ್ಮಿರುವುದು ನೋಡಿದರೆ ಅವರು ಸಹ ಪರೋಕ್ಷವಾಗಿ ಸಹಕಾರ ನೀಡಿದ್ದು, ಸ್ಪಷ್ಟವಾಗುತ್ತದೆ. ಆದ್ದರಿಂದ ನೈತಿಕ ಹೊಣೆ ಹೊತ್ತು ಪ್ರಮಾಣ ವಚನ ಸ್ವೀಕರಿಸಬಾರದು ಹಾಗೂ ಬೇಷರತ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಬೆಂಗಳೂರು ರಾಮೇಶ್ವರಂ ಬಾಂಬ್ ಸ್ಪೋಟ್ ಪ್ರಕರಣ ಐಎನ್ ಎ ತನಿಖೆಗೆ ನೀಡಿದ್ದಾರೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ತನಿಖೆ ನಡೆಯುತ್ತಿಲ್ಲ. ಪಾಕ್ ಪರ ಘೋಷಣೆ ಹಾಗೂ ಬಾಂಬ್ ಸ್ಪೋಟ್ ಇಂತಹ ಘಟನೆಗಳು ಆಡಳಿತ ಪಕ್ಷದ ವೈಫಲ್ಯ ಕಾರಣ ಎಂಬುವುದು ಸ್ಪಷ್ಟವಾಗುತ್ತದೆ ಎಂದು ಹರಿಹಾಯ್ದರು.