ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಕೋಟಾದಲ್ಲಿ ಶಿವರಾತ್ರಿ ಹಬ್ಬದ ಸಂದರ್ಭ ಹದಿನೇಳು ಮಕ್ಕಳು ಮತ್ತು ಮಹಿಳೆಯೊಬ್ಬರು ಎಲೆಕ್ಟ್ರಿಕ್ ಶಾಕ್‌ನಿಂದ ಮೈಪೂರ್ತಿ ಸುಟ್ಟುಕೊಂಡಿದ್ದಾರೆ.
ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಳಿ ಬಸ್ತಿ ಪ್ರದೇಶದಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದ ಮೆರವಣಿಗೆಯ ವೇಳೆ ಈ ಘಟನೆ ನಡೆದಿದೆ.
ಈ ಘಟನೆ ನಡೆದ ಕುಂಹಾರಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಅರವಿಂದ ಭಾರಧ್ವಾಜ್ ಅವರು ನೀಡಿದ ಮಾಹಿತಿ ಪ್ರಕಾರ, ಮಕ್ಕಳ ತಂಡವು ಮೆರವಣಿಗೆಯ ಭಾಗವಾಗಿತ್ತು ಮತ್ತು ಒಂದು ದೇವಸ್ಥಾನದಿಂದ ಇನ್ನೊಂದು ದೇವಸ್ಥಾನಕ್ಕೆ ಕಲಶವನ್ನು (ಪಾತ್ರೆ) ಹೊತ್ತುಕೊಂಡು ಹೋಗುತ್ತಿತ್ತು ಈ ವೇಳೆ ಘಟನೆ ನಡೆದಿದೆ ಎಂದಿದ್ದಾರೆ.
ಕಾಲೋನಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಕ್ಕಳು ಕಬ್ಬಿಣದ ರಾಡ್‌ನಲ್ಲಿ ಧ್ವಜವನ್ನು ಹಾರಿಸಿದ್ದರು. ರಾಡ್ ಹೈಟೆನ್ಷನ್ ತಂತಿಗೆ ತಗುಲಿ ಮಹಿಳೆಯೊಂದಿಗೆ ಮಕ್ಕಳು ವಿದ್ಯುತ್ ಶಾಕ್‌ಗೆ ತುತ್ತಾಗಿದ್ದಾರೆ. ಅವರೆಲ್ಲರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ..
ಕೋಟಾದ ಎಂಬಿಎಸ್ ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳು 9 ರಿಂದ 16 ವರ್ಷದೊಳಗಿನವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.