ಹೊಸದಿಗಂತ ವರದಿ,ಸುಂಟಿಕೊಪ್ಪ:
ಇಲ್ಲಿನ ಗದ್ದೆಹಳ್ಳದ ನಾರ್ಗಾಣೆ ಗ್ರಾಮದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದ್ದು, ತನಿಖೆ ಚುರುಕುಗೊಳಿಸಿರುವ ಪೊಲೀಸರು ಕೆಲವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಾರ್ಗಾಣೆ ಗ್ರಾಮದ ಯಂಕನ ದೇವರಾಜ್ ಎಂಬವರ ಗದ್ದೆಯಲ್ಲಿ ನವಜಾತ ಗಂಡು ಮಗುವಿನ ಶವ ಕಂಡು ಬಂದಿದ್ದು, ಈ ಸುಂಟಿಕೊಪ್ಪ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು.
ಠಾಣಾಧಿಕಾರಿ ಶ್ರೀಧರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಸ್ಥಳಕ್ಕೆ ಕುಶಾಲನಗರ ತಹಶೀಲ್ದಾರ್ ಕಿರಣ್ ಗೌರಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಡಿವೈಎಸ್‌ಪಿ ಗಂಗಾಧರಪ್ಪ, ವೃತ್ತ ನಿರೀಕ್ಷ ರಾಜೇಶ್ ಕೋಟ್ಯಾನ್ ಭೇಟಿ ನೀಡಿ ತನಿಖಾ ತಂಡವನ್ನು ರಚಿಸಿದ್ದಾರೆ. ಸಂಶಯಾಸ್ಪದ ವ್ಯಕ್ತಿಗಳನ್ನು ಈಗಾಗಲೇ ವಿಚಾರಣೆಗೆ ಒಳಪಡಿದ್ದಾರೆ.