ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮಧ್ಯಪ್ರದೇಶದ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳು ನಡೆಯುತ್ತಿವೆ. ಇಂದು, ಮಾಜಿ ಸಚಿವ ಮತ್ತು ಹಿರಿಯ ಕಾಂಗ್ರೆಸ್ ಸಂಸದ ಸುರೇಶ್ ಪಚೌರಿ, ಮಾಜಿ ಸಂಸದ ಗಜೇಂದ್ರ ಸಿಂಗ್ ರಾಜುಖೇಡಿ ಮತ್ತು ಪಕ್ಷದ ಮಾಜಿ ಸಂಸದರು ಸೇರಿದಂತೆ ಅನೇಕ ನಾಯಕರು ಭೋಪಾಲ್ನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ರಾಜ್ಯ ಬಿಜೆಪಿ ಅಧ್ಯಕ್ಷ ವಿಡಿ ಶರ್ಮಾ ಮತ್ತು ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಸಮ್ಮುಖದಲ್ಲಿ ಸುರೇಶ್ ಪಚೌರಿ ಸಂಸದ ಗಜೇಂದ್ರ ಸಿಂಗ್ ರಾಜುಖೇಡಿ ಮತ್ತು ಪಕ್ಷದ ಮಾಜಿ ಶಾಸಕರು ಕಾಂಗ್ರೆಸ್ನಿಂದ ಹೊರನಡೆದು. ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.
ಪಚೌರಿ ಅವರು ಕಾಂಗ್ರೆಸ್ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದರು ಮತ್ತು ಪಕ್ಷದಿಂದ ನಾಲ್ಕು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಪಚೌರಿ ಈ ಹಿಂದೆ ಮಧ್ಯಪ್ರದೇಶ ಘಟಕದ ಅಧ್ಯಕ್ಷ ಹುದ್ದೆ ಸೇರಿದಂತೆ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದರು. ಯುವ ಕಾಂಗ್ರೆಸ್ನ ರಾಜ್ಯ ಘಟಕದ ಅಧ್ಯಕ್ಷರೂ ಕೂಡ ಆಗಿದ್ದರು.