ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗೇಪಲ್ಲಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಇನ್ನೋವಾ ಕಾರು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 44ರ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ಇನ್ನೋವಾ ಕಾರಿನಲ್ಲಿ ತೆರಳುತ್ತಿದ್ದ ಉದ್ಯಮಿ ಸೀನಪ್ಪ ಅವರಿಗೆ ಯಾವುದೇ ಗಾಯಗಳಾಗಿಲ್ಲ. ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.