ದೆಹಲಿಯಲ್ಲಿ ನಾಳೆ ಬಿಜೆಪಿ ಸಿಇಸಿ ಸಭೆ: ಬಿಡುಗಡೆ ಆಗುತ್ತಾ ಅಭ್ಯರ್ಥಿಗಳ 2ನೇ ಪಟ್ಟಿ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಯ ಕಾವೇರಿದ್ದು, ಬಿಜೆಪಿ ಎರಡನೇ ಪಟ್ಟಿಗಾಗಿ ಕಾತರದಿಂದ ಎದುರುನೋಡುತ್ತಿದೆ. ಇಂದು ದೆಹಲಿಯಲ್ಲಿ ನಡೆಯಬೇಕಿದ್ದ ಬಿಜೆಪಿ ಸಿಇಸಿ ಸಭೆ ರದ್ದಾಗಿದ್ದು, ಸೋಮವಾರ (ಮಾ. 11) ಸಂಜೆ 5 ಗಂಟೆಗೆ ಮುಂದೂಡಿಕೆಯಾಗಿದೆ.

ಈ ವೇಳೆ ಎರಡನೇ ಪಟ್ಟಿ ಕುರಿತು ರಾಜ್ಯದ ಪ್ರಮುಖ ನಾಯಕರು ದೆಹಲಿಗೆ ತೆರಳಲಿದ್ದಾರೆ.ಪಕ್ಷದ ಹಿರಿಯ ನಾಯಕರಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಆರ್​. ಅಶೋಕ್, ಅರವಿಂದ್ ಬೆಲ್ಲದ್, ಪ್ರಲ್ಹಾದ ಜೋಷಿ, ಬಿ.ವೈ. ವಿಜಯೇಂದ್ರ, ರಾಜೇಶ್ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.

ಮಾರ್ಚ್​​ 02ರಂದು ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಿತ್ತು.195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದರು. ಈ ಪಟ್ಟಿಯಲ್ಲಿ ಕರ್ನಾಟಕದಿಂದ ಯಾವುದೇ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರನ್ನು ಘೋಷಿಸರಲಿಲ್ಲ. ಆದರೆ ಈಗ ಎರಡನೇ ಪಟ್ಟಿಯಲ್ಲಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!