ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದೆ, ರಾಜಕೀಯ ವಲಯದಲ್ಲಿ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ. ಇನ್ನು ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಸೇರಿದಂತೆ ಐದು ರಾಜ್ಯಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಲೋಕಸಭೆ ಯುದ್ಧಕ್ಕೆ ತಯಾರಿ ನಡೆಸುತ್ತಿರುವ ಕೇಸರಿ ಪಡೆ, ಈ ಬಾರಿ ವಿಜಯಪತಾಕೆ ಹಾರಿಸಲು ಸಜ್ಜಾಗಿದ್ದಾರೆ. ಲೋಕ ಸಮರವನ್ನು ವಶಪಡಿಸಿಕೊಳ್ಳಲು ‘ನಮೋ’ ಮತ್ತೊಮ್ಮೆ ದಕ್ಷಿಣ ದಂಡಯಾತ್ರೆ ಕೈಗೊಳ್ಳುತ್ತಿದ್ದು, ಪ್ರಧಾನಿ ಮೋದಿಯವರ ದಕ್ಷಿಣ ರಾಜ್ಯಗಳ ಪ್ರವಾಸಕ್ಕೆ ಸಿದ್ಧತೆಗಳು ನಡೆಯುತ್ತಿವೆ.
ಮಾರ್ಚ್ 15 ರಿಂದ 19 ರವರೆಗೆ ಮೋದಿ ದಕ್ಷಿಣ ಪ್ರವಾಸ ಕೈಗೊಳ್ಳಲಿದ್ದಾರೆ. ಕರ್ನಾಟಕದಿಂದ ಯಾತ್ರೆ ಆರಂಭಿಸಲಿರುವ ಮೋದಿ ತಮಿಳುನಾಡು, ಕೇರಳ, ಆಂಧ್ರ ಮತ್ತು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.