ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ದಶಕದಲ್ಲಿ ಕರ್ನಾಟಕಕ್ಕೆ ಅಭಿವೃದ್ಧಿ ಕಾರ್ಯಕ್ರಮಗಳ ಜತೆಗೆ ಅಪಾರ ಅನುದಾನ ನೀಡಿರುವ ಪ್ರಧಾನಿ ಮೋದಿ ಸರಕಾರವನ್ನು ರಾಜ್ಯದ ಜನತೆ ಬೆಂಬಲಿಸಬೇಕು ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಚ್.ಡಿ.ರೇವಣ್ಣ ಮನವಿ ಮಾಡಿದರು.
ಭಾನುವಾರ ನಗರದ ಮಹಾರಾಜ ಕಾಲೇಜು ಆವರಣದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಮ್ಮಿಕೊಂಡಿದ್ದ 4 ಸಾವಿರ ಕೋಟಿ ರೂ. ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಹಾಸನ ಜಿಲ್ಲೆಗೆ 10,500 ಕೋಟಿ ರೂ. ರಸ್ತೆ ನಿರ್ವಹಣೆಗೆ ಅನುದಾನ ಮೀಸಲಿಡಲಾಗಿದೆ. 10 ವರ್ಷಗಳಲ್ಲಿ ಹಾಸನ ಜಿಲ್ಲೆಗೆ 35 ಸಾವಿರ ಕೋಟಿ ಅನುದಾನ ನೀಡಿದ್ದಾರೆ ಎಂದು ತಿಳಿಸಿದರು.
ಎಚ್.ಡಿ.ದೇವೇಗೌಡರು ನಿತಿನ್ ಗಡ್ಕರಿ ಅವರನ್ನು ಭೇಟಿಯಾದಾಗ ಎಲ್ಲ ಯೋಜನೆಗಳನ್ನು ನೋಡಿ ಒಪ್ಪಿಗೆ ನೀಡಿದ್ದಾರೆ. ನಿತಿನ್ ಗಡ್ಕರಿ ಅವರ ಕೆಲಸವನ್ನು ಶ್ಲಾಘಿಸಿದ್ದಾರೆ. ಆದ್ದರಿಂದ ರಾಜ್ಯದ ಜನತೆ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರಕಾರವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.