ಸಿಎಎ ನಿಯಮ ಜಾರಿಯ ಟೈಮಿಂಗ್‌ ಪ್ರಶ್ನಿಸಿದ ಕಾಂಗ್ರೆಸ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ಜಾರಿ ಮಾಡಿದೆ. ಇದರ ಬೆನ್ನಲ್ಲೇ ಕೇಂದ್ರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್​, ಸಿಎಎ ಜಾರಿ ಮಾಡಿದ ಸಮಯವನ್ನು ಪ್ರಶ್ನೆ ಮಾಡಿದೆ.

ಕಾಂಗ್ರೆಸ್​ ವಕ್ತಾರ ಜೈರಾಮ್​ ರಮೇಶ್​ ತಮ್ಮ ಎಕ್ಸ್​ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. 2019ರ ಡಿಸೆಂಬರ್​ನಲ್ಲಿ ಸಂಸತ್ತು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯ ‘ಅಧಿಸೂಚನೆ ಪ್ರಕಟಿಸಲು ಮೋದಿ ಸರ್ಕಾರಕ್ಕೆ ನಾಲ್ಕು ವರ್ಷ ಮತ್ತು ಮೂರು ತಿಂಗಳುಗಳನ್ನು ತೆಗೆದುಕೊಂಡಿದೆ. ತಮ್ಮ ಸರ್ಕಾರವು ಉದ್ಯಮ ರೀತಿಯಲ್ಲಿ ಸಮಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಸದಾ ಹೇಳಿಕೊಳ್ಳುತ್ತಾರೆ. ಆದರೆ, ಸಿಎಎ ಅಧಿಸೂಚನೆ ಪ್ರಕಟಿಸಲು ತೆಗೆದುಕೊಂಡ ಸಮಯವು ಪ್ರಧಾನಿ ಮೋದಿ ಅವರ ಮತ್ತೊಂದು ಹಸಿ ಸುಳ್ಳನ್ನು ಪ್ರದರ್ಶಿಸುತ್ತದೆ ಎಂದಿದ್ದಾರೆ.

ಸಿಎಎ ಅಧಿಸೂಚನೆ ಪ್ರಕಟಿಸಲು ಸುಮಾರು 9 ಬಾರಿ ಕಾಲಾವಕಾಶ ತೆಗೆದುಕೊಂಡ ಬಳಿಕ ಲೋಕಸಭಾ ಚುನಾವಣೆಗೂ ಮುನ್ನವೇ ಸಿಎಎ ಜಾರಿ ಮಾಡಿರುವುದು ವಿಶೇಷವಾಗಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಲೋಕಸಭಾ ಚುನಾವಣಾ ಧ್ರುವೀಕರಣಕ್ಕಾಗಿ ಸ್ಪಷ್ಟವಾಗಿ ವಿನ್ಯಾಸಗೊಳಿಸಲಾಗಿದೆ. ಚುನಾವಣಾ ಬಾಂಡ್‌ಗಳ ಹಗರಣದ ಕುರಿತು ಸುಪ್ರೀಂ ಕೋರ್ಟ್‌ನ ಕಟ್ಟುನಿಟ್ಟಿನ ಕ್ರಮದ ನಂತರ ತಮ್ಮ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನದಂತೆ ಕಂಡುಬರುತ್ತಿದೆ ಎಂದು ಜೈರಾಮ್​ ರಮೇಶ್​ ಟೀಕಾ ಪ್ರಹಾರ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!